ADVERTISEMENT

‘ತಂತ್ರಜ್ಞಾನದಿಂದ ಕುಲಕಸುಬಿಗೆ ಬೇಡಿಕೆ ಕುಸಿತ’

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 20:00 IST
Last Updated 30 ಜನವರಿ 2018, 20:00 IST
ನಗರದಲ್ಲಿ ಮಂಗಳವಾರ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಆಯೋಜಿಸಿದ್ದ 2017ನೇ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ (ಎಡದಿಂದ ಕುಳಿತವರು) ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ, ಶ್ಯಾಮ್ ಸುಂದರ್ ಭಟ್, ಎಂ. ರಾಮಮೂರ್ತಿ, ಮಾನಪ್ಪ ಶಂಕ್ರಪ್ಪ ಬಡಿಗೇರ ಮತ್ತು ಜಾನ್ ದೇವರಾಜ್ ಇವರಿಗೆ 2017ನೇ ಸಾಲಿನ ಗೌರವ ಪ್ರಶಸ್ತಿ ನೀಡಿ ಗೌರವಿಸಿದರು. (ಎಡದಿಂದ ನಿಂತವರು) ಕರ್ನಾಟಕ ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್ ಎಚ್.ವಿ. ಇಂದ್ರಮ್ಮ, ಸಮಾಜ ಕಲ್ಯಾಣ ಇಲಾಖೆ ಸಚಿವ  ಎಚ್.ಆಂಜನೇಯ, ಶಿಲ್ಪ ಕಲಾವಿದ ಗಣೇಶ್ ಎಲ್. ಭಟ್, ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅಧ್ಯಕ್ಷ ಶಿಲ್ಪ ರು. ಕಾಳಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್, ಶಿಲ್ಪ ಕಲಾವಿದರು ಮನೋಹರ ಬಡಿಗೇರ ಮತ್ತು  ಆರ್ ಜಿ ಸಿಂಗ್ ಇದ್ದಾರೆ - ಪ್ರಜಾವಾಣಿ ಚಿತ್ರ

ಬೆಂಗಳೂರು: ‌ತಂತ್ರಜ್ಞಾನ ಕ್ಷೇತ್ರ ಅಭಿವೃದ್ಧಿ ಹೊಂದಿದಂತೆ ಕಲಾವಿದರ ಕುಲ ಕಸುಬಿಗೆ ‌ಬೇಡಿಕೆ ಇಲ್ಲವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.

ಕರ್ನಾಟಕ ಶಿಲ್ಪಕಲಾ ಅ‌ಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕುಟುಂಬ ನಿರ್ವಹಣೆಗೂ ಸಾಧ್ಯವಾಗದಷ್ಟು ಕಷ್ಟದಲ್ಲಿ  ಕಲಾವಿದರಿದ್ದಾರೆ. ಅಂತಹ ಕಲಾವಿದರಿಗೆ ಕನಿಷ್ಠ ₹ 5,000 ಪಿಂಚಣಿ ನೀಡಬೇಕು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ರು. ಕಾಳಾಚಾರ್ ಒತ್ತಾಯಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಆಂಜನೇಯ, ‘ಕಲಾವಿದರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.