ADVERTISEMENT

ಬಸ್‌ ನಿಲ್ದಾಣಗಳಲ್ಲಿ ಫ್ಲೆಕ್ಸ್‌ ಅಳವಡಿಕೆಗೆ ಅವಕಾಶವಿದೆಯೇ: ಹೈಕೋರ್ಟ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 20:02 IST
Last Updated 30 ಜನವರಿ 2018, 20:02 IST

ಬೆಂಗಳೂರು: ‘ನಗರದ ವಿವಿಧ ಬಸ್‌ ನಿಲ್ದಾಣದ ತಂಗುದಾಣಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಭಾವಚಿತ್ರ ರಾರಾಜಿಸುತ್ತವೆಯಲ್ಲಾ ಅವುಗಳೆಲ್ಲಾ ಜಾಹೀರಾತು ಅಲ್ಲವೇ, ಅವುಗಳಿಗೆ ಅವರೇನಾದರೂ ಶುಲ್ಕ ಪಾವತಿಸುತ್ತಾರೆಯೇ’ ಎಂದು ಹೈಕೋರ್ಟ್‌ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಮೌಖಿಕವಾಗಿ ಪ್ರಶ್ನಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಈ ರೀತಿ ಭಾವಚಿತ್ರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲು ಕಾನೂನಿನಲ್ಲಿ ಅವಕಾಶಗಳಿವೆಯೇ ಹೇಗೆ’ ಎಂದು ಪ್ರಶ್ನಿಸಿತು.

ಮಾಹಿತಿ ಹಕ್ಕು ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿರುವ ಈ ಅರ್ಜಿಯನ್ನು ಇನ್ನಷ್ಟು ಮಾರ್ಪಾಡು ಮಾಡಿ ಸಲ್ಲಿಸಲು ಅವಕಾಶ ನೀಡಿದ ನ್ಯಾಯಪೀಠ, ‘ಎಲ್ಲೆಲ್ಲಿ ಅನಧಿಕೃತ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ’ ಎಂಬ ವಿವರಗಳೊಂದಿಗೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.