ADVERTISEMENT

ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ: ಆಕ್ಷೇಪಣೆಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST

ಬೆಂಗಳೂರು: ಬಿಬಿಎಂಪಿ ಪೂರ್ವ ವಲಯ ವ್ಯಾಪ್ತಿಯ 44 ವಾರ್ಡ್‌ಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿದ್ದು, ಅದರ ವಿವರಗಳನ್ನು ಸಹಾಯಕ ಕಂದಾಯ ಅಧಿಕಾರಿ ಹಾಗೂ ವಾರ್ಡ್‌ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಈಗಾಗಲೇ ನೋಂದಾಯಿಸಿರುವ ಬೀದಿಬದಿ ವ್ಯಾಪಾರಿಗಳ ಹೆಸರು ಸಮೀಕ್ಷಾ ಪಟ್ಟಿಯಿಂದ ಕೈಬಿಟ್ಟಿದ್ದರೆ ಅಥವಾ ಲೋಪದೋಷ ಕಂಡುಬಂದಿದ್ದರೆ ವಲಯದ ಕಲ್ಯಾಣಾಧಿಕಾರಿಗಳ ಕಚೇರಿಯ ಜಂಟಿ ಆಯುಕ್ತರಿಗೆ (ಪೂರ್ವ) ಮನವಿ ಸಲ್ಲಿಸಬಹುದು. ಹೆಸರು ಸೇರ್ಪಡೆಗೆ ಏಳು ದಿನಗಳ ಒಳಗೆ ಲಿಖಿತ ಮನವಿ ಸಲ್ಲಿಸಲು ಸೂಚಿಸಲಾಗಿದೆ. ನಂತರ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಸಂಪರ್ಕಕ್ಕೆ ದೂರವಾಣಿ ಸಂಖ್ಯೆ 080– 22975677.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.