ADVERTISEMENT

ಹೆಗ್ಗಡೆನಗರದ ಸಮುದಾಯ ಭವನ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST
ಕೃಷ್ಣ ಬೈರೇಗೌಡ ಅವರು ಸಮುದಾಯ ಭವನ ಉದ್ಘಾಟಿಸಿದರು. ಪಾಲಿಕೆ ಸದಸ್ಯೆ ಮಮತಾ ವೆಂಕಟೇಶ್‌, ಕಾಂಗ್ರೆಸ್‌ ಮುಖಂಡರಾದ ಜಯಗೋಪಾಲಗೌಡ, ಶ್ರೀನಿವಾಸಯ್ಯ ಹಾಗೂ ಗೌರೀಶ್‌ ಇದ್ದಾರೆ
ಕೃಷ್ಣ ಬೈರೇಗೌಡ ಅವರು ಸಮುದಾಯ ಭವನ ಉದ್ಘಾಟಿಸಿದರು. ಪಾಲಿಕೆ ಸದಸ್ಯೆ ಮಮತಾ ವೆಂಕಟೇಶ್‌, ಕಾಂಗ್ರೆಸ್‌ ಮುಖಂಡರಾದ ಜಯಗೋಪಾಲಗೌಡ, ಶ್ರೀನಿವಾಸಯ್ಯ ಹಾಗೂ ಗೌರೀಶ್‌ ಇದ್ದಾರೆ   

ಬೆಂಗಳೂರು: ಬ್ಯಾಟರಾಯನಪುರದ ಹೆಗ್ಗಡೆನಗರದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ₹1.35 ಕೋಟಿ ವೆಚ್ಚದ ಸಮುದಾಯ ಭವನವನ್ನು ಕೃಷಿ ಸಚಿವ ಕೃಷ್ಣಬೈರೇಗೌಡ ಶನಿವಾರ ಉದ್ಘಾಟಿಸಿದರು.

ಹೆಗ್ಗಡೆನಗರ ಸುತ್ತಮುತ್ತಲ ಬಡಾವಣೆಗಳಲ್ಲಿ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಜನರು ಹೆಚ್ಚಾಗಿ ವಾಸವಿದ್ದಾರೆ. ಅವರಿಗೆ ಅನುಕೂಲವಾಗಲೆಂದು ಈ ಭವನ ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಭವನದ ಉಸ್ತುವಾರಿಯನ್ನು ಬಿಬಿಎಂಪಿಯೇ ನೋಡಿಕೊಳ್ಳುತ್ತದೆ. ಕಡಿಮೆ ದರದಲ್ಲಿ ಭವನವನ್ನು ಬಾಡಿಗೆಗೆ ನೀಡಲಾಗುತ್ತದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆಯಬೇಕು ಎಂದರು.

ADVERTISEMENT

ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 20 ಕೊಳವೆ ಬಾವಿಗಳನ್ನು ಕೊರೆಸಿದರೂ ನೀರು ಸಿಕ್ಕಿಲ್ಲ. ಹೀಗಾಗಿ, ಕಾವೇರಿ ನೀರನ್ನು ಪೂರೈಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅದು ಪೂರ್ಣಗೊಂಡರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.