ADVERTISEMENT

ಮೆಟ್ರೊ ನಿಲ್ದಾಣಗಳಲ್ಲಿ ಹೆಚ್ಚುವರಿ ಎಸ್ಕಲೇಟರ್‌ಗಳು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2018, 19:30 IST
Last Updated 5 ಫೆಬ್ರುವರಿ 2018, 19:30 IST

ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಎಸ್ಕಲೇಟರ್‌ಗಳನ್ನು ಅಳವಡಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ಧರಿಸಿದೆ.

ಮೈಸೂರು ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಇಳಿಯುವ ಎಸ್ಕಲೇಟರ್‌ ಅನ್ನು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್‌ ಸೋಮವಾರ ಉದ್ಘಾಟಿಸಿದರು.

ಅನೇಕ ಮೆಟ್ರೊ ನಿಲ್ದಾಣಗಳಲ್ಲಿ ಮೇಲಕ್ಕೆ ಹತ್ತಲು ಮಾತ್ರ ಎಸ್ಕಲೇಟರ್‌ ಸೌಲಭ್ಯ ಇದೆ. ಇಳಿಯುವುದಕ್ಕೆ ಈ ಸೌಕರ್ಯ ಇಲ್ಲ. ಶಿಘ್ರವೇ ಈ ಸೌಕರ್ಯವನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.