ADVERTISEMENT

ಲಾಠಿ ಪ್ರಹಾರ: 10 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST

ಹರಿಹರ: ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಗೋಮಾಳ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 10 ನಿವಾಸಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿದ್ದಾರೆ.

ತಹಶೀಲ್ದಾರ್ ರೆಹಾನ್‌ ಪಾಷಾ ನೇತೃತ್ವದಲ್ಲಿ ಮಂಗಳವಾರ ನಡೆದ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ 20 ಜನರನ್ನು ಬಂಧಿಸಲಾಗಿದೆ.

ಬುಳ್ಳಾಪುರ ಗ್ರಾಮದ ಗೋಮಾಳದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದ 19 ಕುಟುಂಬಗಳಿಗೆ ಸರ್ಕಾರ 2005ರಲ್ಲಿ ಹಕ್ಕುಪತ್ರ ವಿತರಿಸಿತ್ತು. ನಿವೇಶನ ಸಿಗುತ್ತದೆಂಬ ಆಸೆಯಿಂದ ಇನ್ನೂ ಕೆಲವರು ಕೆಲ ತಿಂಗಳ ಹಿಂದೆ ಗೋಮಾಳದಲ್ಲಿ 42 ತಾತ್ಕಾಲಿಕ ಮನೆಗಳನ್ನು ಕಟ್ಟಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಡಳಿತ ಮನೆಗಳ ತೆರವಿಗೆ ನಾಲ್ಕು ದಿನಗಳ ಕಾಲಾವಕಾಶ ನೀಡಿತ್ತು.

ADVERTISEMENT

ಜಿಲ್ಲಾಡಳಿತದ ಆದೇಶಕ್ಕೆ ನಿವಾಸಿಗಳು ಜಗ್ಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ನಿವಾಸಿಗಳು ಅಡ್ಡಿಪಡಿಸಿದ್ದಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸೂರು ಕಳೆದುಕೊಂಡವರು ಪರ್ಯಾಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.