ADVERTISEMENT

‘ಸರ್ಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 20:34 IST
Last Updated 7 ಫೆಬ್ರುವರಿ 2018, 20:34 IST
ಅರೋಗ್ಯ ಶಿಬಿರದಲ್ಲಿ ವೈದ್ಯಾಧಿಕಾರಿಗಳು ತಪಾಸಣೆ ನಡೆಸಿದರು
ಅರೋಗ್ಯ ಶಿಬಿರದಲ್ಲಿ ವೈದ್ಯಾಧಿಕಾರಿಗಳು ತಪಾಸಣೆ ನಡೆಸಿದರು   

ಬೆಂಗಳೂರು: ಬಡರೋಗಿಗಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಜಾರಿಗೆ ತಂದಿರುವ ಹಲವಾರು ಸವಲತ್ತುಗಳನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಚಂದ್ರಶೇಖರ್ ತಿಳಿಸಿದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಕೆ.ಆರ್‌. ಪುರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಬಿಪಿಎಲ್ ಕುಟುಂಬಗಳಿಗೆ ಉತ್ತಮ ದರ್ಜೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಕೊಡಿಸಲಾಗುವುದು. ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

ಅರೋಗ್ಯ ಶಿಬಿರದಲ್ಲಿ ನುರಿತ ವೈದ್ಯರ ತಂಡ ಸಾರ್ವಜನಿಕರಿಗೆ ತಪಾಸಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.