ADVERTISEMENT

ಕೈದಿಗಳ ಅಸಹಜ ಸಾವು: ಹೈಕೋರ್ಟ್‌ಗೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:30 IST
Last Updated 8 ಫೆಬ್ರುವರಿ 2018, 19:30 IST

ಬೆಂಗಳೂರು: ‘ರಾಜ್ಯದ ಜೈಲುಗಳಲ್ಲಿ ಮೃತಪಟ್ಟಿರುವ 48 ಕೈದಿಗಳ ಪೈಕಿ ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ರಾಜ್ಯದ ಜೈಲುಗಳಲ್ಲಿ 2012ರ ಜನವರಿಯಿಂದ 2017ರ ಅಕ್ಟೋಬರ್ ನಡುವಿನ ಅವಧಿಯಲ್ಲಿ ಒಟ್ಟು 48 ಅಸಹಜ ಸಾವು ಸಂಭವಿಸಿವೆ. ಇವುಗಳಲ್ಲಿ 35 ಆತ್ಮಹತ್ಯೆ ಪ್ರಕರಣಗಳಾಗಿವೆ’ ಎಂದು ಸರ್ಕಾರ ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.

‘ಆತ್ಮಹತ್ಯೆ ಮಾಡಿಕೊಂಡ ಕೈದಿಗಳ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ರಾಜ್ಯ ಸರ್ಕಾರದ ನಿಲುವು ಸ್ಪಷ್ಟಪಡಿಸಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿದೆ.

ADVERTISEMENT

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿಯನ್ನು ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.