ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ: ಇಂದು ಅಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:38 IST
Last Updated 8 ಫೆಬ್ರುವರಿ 2018, 19:38 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರರ ಪಟ್ಟಿಯ ವೀಕ್ಷಕ ರಾಜೇಂದ್ರ ಕುಮಾರ್‌ ಕಠಾರಿಯಾ ಅವರು 28 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಶುಕ್ರವಾರ (ಇದೇ 9) ಬೆಳಿಗ್ಗೆ 10.45ಕ್ಕೆ ಅಹವಾಲು ಸ್ವೀಕರಿಸಲಿದ್ದಾರೆ.

ಮಲ್ಲೇಶ್ವರದ 16ನೇ ಅಡ್ಡರಸ್ತೆಯ ಪಾಲಿಕೆ ಐ.ಪಿ.ಪಿ ಕಟ್ಟಡದಲ್ಲಿ ಸಾರ್ವಜನಿಕರು, ಸಂಘ–ಸಂಸ್ಥೆಗಳ ಸದಸ್ಯರು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಬಹುದು. ಮತದಾರರ ಪಟ್ಟಿಗೆ ಸಂಬಂಧಿಸಿದ ಗೊಂದಲಗಳಿದ್ದರೆ ಪರಿಹರಿಸಿಕೊಳ್ಳಬಹುದು.

ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. 2017ರ ನವೆಂಬರ್ 1ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿಯಲ್ಲಿದೆ. ಕರಡು ಮತದಾರರ ಪಟ್ಟಿಯನ್ನು 2017ರ ನವೆಂಬರ್‌ 30ರಂದು ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.