ADVERTISEMENT

ಇಂದು ಜೆಡಿಎಸ್ ಕಾರ್ಯಕರ್ತರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 20:15 IST
Last Updated 9 ಫೆಬ್ರುವರಿ 2018, 20:15 IST

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ಸಮಾವೇಶ ಕೊಮ್ಮಘಟ್ಟ-ಕೆಂಗೇರಿ ರಸ್ತೆಯ ಸ್ಯಾಟ್‌ಲೈಟ್ ಕ್ಲಬ್ ಬಳಿ ಇದೇ 10ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದು ಜೆಡಿಎಸ್‌ನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಟಿ.ಎನ್‌. ಜವರಾಯಿಗೌಡ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT