ADVERTISEMENT

₹10 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2018, 19:30 IST
Last Updated 10 ಫೆಬ್ರುವರಿ 2018, 19:30 IST

ಬೆಂಗಳೂರು: ಹೆಸರಘಟ್ಟ ಹೋಬಳಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಶಾಸಕ ಎಸ್‌.ಆರ್‌.ವಿಶ್ವನಾಥ್ ಚಾಲನೆ ನೀಡಿದರು.

ಸಿಂಗನಾಯಕನಹಳ್ಳಿಯಲ್ಲಿ ₹3 ಕೋಟಿ, ಕಸಘಟ್ಟಪುರ ಗ್ರಾಮ ಪಂಚಾಯಿತಿಯಲ್ಲಿ ₹3 ಕೋಟಿ, ವಡೇರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ₹4 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.

ಹೆಸರಘಟ್ಟ ಮತ್ತು ದಾಸನಪುರ ಹೋಬಳಿಯ ಗ್ರಾಮಗಳಿಗೆ ಸಂಪರ್ಕ ರಸ್ತೆಗಳ ನಿರ್ಮಾಣ ಕಾಮಗಾರಿ ಮುಗಿದ್ದು, ವಾರದೊಳಗೆ ಸಂಚಾರಕ್ಕೆ ಅನುವು ಮಾಡಿ ಕೊಡಲಾಗುತ್ತದೆ ಎಂದರು.

ADVERTISEMENT

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ₹61 ಕೋಟಿ ವೆಚ್ಚದಲ್ಲಿ ಗೊಲ್ಲಹಳ್ಳಿಯಿಂದ ರಾಜಾನುಕುಂಟೆವರೆಗಿನ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ‘ಹೆಸರಘಟ್ಟ ಹೋಬಳಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.