ADVERTISEMENT

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಆರ್ಯವೈಶ್ಯರಿಗೆ ಮೀಸಲಾತಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ, ಆರ್ಯವೈಶ್ಯ ಸಮುದಾಯಕ್ಕೆ ಮೀಸಲಾತಿ, ವ್ಯಾಪಾರಕ್ಕೆ ಆರ್ಥಿಕ ನೆರವು ನೀಡಲಾಗುವುದು. ಇವರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲಾಗುವುದು ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವ‌ಸೆ ನೀಡಿದರು.

ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಈ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕುರಿತ ಅವರ ಬೇಡಿಕೆಗಳು ನ್ಯಾಯಯುತವಾಗಿವೆ’ ಎಂದರು.

ADVERTISEMENT

ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ, ‘ಶೆಟ್ರು (ಆರ್ಯವೈಶ್ಯರು) ವದ್ದು ವದ್ದು (ಬೇಡ, ಬೇಡ) ಎನ್ನುವುದೇ ಹೆಚ್ಚು. ಸಂಘಟನೆ, ಹೋರಾಟಗಳ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳದ ನೀವು ಇಂದು ಶಕ್ತಿ ಪ್ರದರ್ಶನ ತೋರಿದ್ದೀರಿ. ಈ ಒಗ್ಗಟ್ಟು ನಿರಂತರವಾಗಿರಲಿ’ ಎಂದರು.

ಮಹಾಮಂಡಳಿಯ ರಾಜ್ಯಾಧ್ಯಕ್ಷ ಅಧ್ಯಕ್ಷ ಟಿ.ಎ.ಶರವಣ, ‘ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ನಿಶ್ಚಿತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.