ADVERTISEMENT

ಅಕ್ಟೋಬರ್‌ 12ರಿಂದ ಅಂತರರಾಷ್ಟ್ರೀಯ ಪುಸ್ತಕ ಮೇಳ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:42 IST
Last Updated 18 ಫೆಬ್ರುವರಿ 2018, 19:42 IST

ಬೆಂಗಳೂರು: ಬೆಂಗಳೂರು ಪುಸ್ತಕ ಮಾರಾಟ ಹಾಗೂ ಪ್ರಕಾಶಕರ ಸಂಘದ ವತಿಯಿಂದ ಅಂತರರಾಷ್ಟ್ರೀಯ ಪುಸ್ತಕ ಮೇಳ ಅರಮನೆ ಮೈದಾನದಲ್ಲಿ ಅಕ್ಟೋಬರ್‌ 12ರಿಂದ 21ರವರೆಗೆ ನಡೆಯಲಿದೆ.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಎನ್‌.ರಾಮಚಂದ್ರ, ‘ಕನ್ನಡ ಪುಸ್ತಕಗಳ 100 ಮಳಿಗೆಗಳು ಇರಲಿದ್ದು, ವಿಶೇಷ ರಿಯಾಯಿತಿ ಕೊಡುತ್ತೇವೆ. ಆಂಗ್ಲ ಮತ್ತು ಕನ್ನಡ ಭಾಷೆಯ ಎಲ್ಲ ಪ್ರಕಾರಗಳ ಪುಸ್ತಕಗಳು ಲಭ್ಯ’ ಎಂದರು.

‘ವೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆ, ವಿಚಾರ ಸಂಕಿರಣ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.