ADVERTISEMENT

ಮಾಹಿತಿ ಸಲ್ಲಿಕೆಗೆ ಹೈಕೋರ್ಟ್‌ ನಿರ್ದೇಶನ

2007ರಲ್ಲಿ ಕೇಂದ್ರಕ್ಕೆ ಸಮಿತಿ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 19:36 IST
Last Updated 19 ಫೆಬ್ರುವರಿ 2018, 19:36 IST

ಬೆಂಗಳೂರು: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅಧ್ಯಕ್ಷತೆಯ ‘ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ’ ಸಲ್ಲಿಸಿರುವ ವರದಿಯನ್ನು ಆಧರಿಸಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸ್ಥಾನಮಾನ ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅಧ್ಯಕ್ಷತೆಯ ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವು 2007ರ ಮೇ 10ರಂದು ಕೇಂದ್ರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಆದರೆ, ಈ ವರದಿಯನ್ನು ಕೇಂದ್ರ ಸರ್ಕಾರ ಒಪ್ಪಿದೆಯೇ  ಇಲ್ಲವೇ ಎಂಬುದರ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ’ ಎಂದು ಆಕ್ಷೇಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.