ADVERTISEMENT

ಬಾಲಕಿ ಮೇಲೆ ದೌರ್ಜನ್ಯ; ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 20:07 IST
Last Updated 19 ಫೆಬ್ರುವರಿ 2018, 20:07 IST

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ಜಾನ್‌ (43) ಎಂಬಾತನಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ನಗರದ 55ನೇ ಸಿಟಿ ಸಿವಿಲ್‌ ನ್ಯಾಯಾಲಯವು ಸೋಮವಾರ ಆದೇಶ ಹೊರಡಿಸಿದೆ.

2014ರ ನವೆಂಬರ್‌ 18ರಂದು ನಡೆದಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವನಮಾಲಾ ಯಾದವ್‌, ದಂಡವನ್ನು ಸಂತ್ರಸ್ತೆಗೆ ನೀಡುವಂತೆ ಸೂಚಿಸಿದರು. ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಸ್‌.ಎನ್‌.ಹಿರೇಮನಿ ವಾದಿಸಿದ್ದರು.

ಅಪರಾಧಿ ಜಾನ್‌ ಚಂದ್ರಾಲೇಔಟ್‌ ನಿವಾಸಿ. ಅದೇ ಪ್ರದೇಶದಲ್ಲಿ ಬಾಲಕಿಯು ಪೋಷಕರೊಂದಿಗೆ ನೆಲೆಸಿದ್ದಳು. ಆಟವಾಡಲೆಂದು ಬಾಲಕಿಯು ಅಪರಾಧಿಯ ಕಟ್ಟಡದ ಪಾರ್ಕಿಂಗ್‌ ಸ್ಥಳಕ್ಕೆ ಹೋಗಿದ್ದಳು. ಆಕೆಯ ಬಳಿ ಹೋಗಿದ್ದ ಅಪರಾಧಿ, ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿದ್ದ.

ADVERTISEMENT

ಕೃತ್ಯದ ಬಗ್ಗೆ ಬಾಲಕಿಯು ತಿಳಿಸುತ್ತಿದ್ದಂತೆ ಪೋಷಕರು ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಜಾನ್‌ನನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.