ADVERTISEMENT

ರೇವಾ ವಿ.ವಿ.ಯಲ್ಲಿ ಮಾತೃಭಾಷಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 19:30 IST
Last Updated 20 ಫೆಬ್ರುವರಿ 2018, 19:30 IST

ಬೆಂಗಳೂರು: ಯಲಹಂಕದ ರೇವಾ ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗ ಹಾಗೂ ಮಾರ್ಕ್‌ ಮೀಡಿಯಾ ಕಮ್ಯುನಿಕೇಷನ್ಸ್ ಆಶ್ರಯದಲ್ಲಿ ಬುಧವಾರ (ಇದೇ 21) ಬೆಳಿಗ್ಗೆ 10.30ಕ್ಕೆ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರದರ್ಶನ ಕಲಾ ವಿಭಾಗದ ಮುಖ್ಯಸ್ಥ ವಸಂತ್ ಕಿರಣ್, ‘ದೇಶದಲ್ಲಿ ನೂರಾರು ಭಾಷೆಗಳನ್ನು ಮಾತನಾಡುವ ಜನರಿದ್ದು, ಪ್ರತಿಯೊಬ್ಬರಿಗೂ ಅವರದ್ದೇ ಆದ ಮಾತೃಭಾಷೆ ಇರುತ್ತದೆ. ಮಾತೃಭಾಷೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ರೇವಾ ವಿಶ್ವವಿದ್ಯಾಲಯದಲ್ಲಿ 20ಕ್ಕೂ ಹೆಚ್ಚು ದೇಶಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಅವರ ಮಾತೃಭಾಷೆಯಲ್ಲಿ ಭಾಷಣ, ಕವನ ವಾಚನ, ಗಾಯನ, ಸಂಗೀತ ಹಾಗೂ ಹಾಡುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಭಾಷೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.