ADVERTISEMENT

ಸ್ಥಳೀಯ ಭಾಷೆಗಳ ಉಳಿಸಲು ‘ಕ್ಲಿಯರ್’ ಹೋರಾಟ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ಬೆಂಗಳೂರು: ಸಂವಿಧಾನದ 8ನೇಪರಿಚ್ಛೇದಕ್ಕೆ ಸೇರಿರುವ 22 ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡಬೇಕು ಹಾಗೂ ಕೇಂದ್ರ ಸರ್ಕಾರದ ಅಧಿಕೃತ ಭಾಷೆಗಳಾಗಿ ಘೋಷಿಸಬೇಕು ಎಂದು ಭಾಷಾ ಸಮಾನತೆ ಮತ್ತು ಹಕ್ಕುಗಳಿಗಾಗಿ ಅಭಿಯಾನ (ಕ್ಲಿಯರ್‌) ಒತ್ತಾಯಿಸಿದೆ.

ಅಭಿಯಾನದ ಅಧ್ಯಕ್ಷ ಜೋಗ ಸಿಂಗ್‌ ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭಾರತದಲ್ಲಿ ಭಾಷಾ ಸಮಾನತೆ ಮತ್ತು ಹಕ್ಕುಗಳ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು 22 ಭಾಷೆಗಳ ಪ್ರತಿನಿಧಿಗಳು ಸಭೆ ಸೇರಿ ಚರ್ಚಿಸಿದ್ದೇವೆ. 16 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ’ ಎಂದರು.

ಕ್ಲಿಯರ್‌ ಉಪಾಧ್ಯಕ್ಷ ಆನಂದ್‌ ಮಾತನಾಡಿ, ‘ನಮ್ಮ ಬೇಡಿಕೆಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ಧರಾಮಯ್ಯ ಅವರಿಗೆ ಸಲ್ಲಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

‘ನಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಂವಿಧಾನ ತಿದ್ದುಪಡಿಯ ಅವಶ್ಯಕತೆ ಇಲ್ಲ. ಅಂತಹ ಬೇಡಿಕೆಗಳ ಈಡೇರಿಸಲು ಬೇಕಾದ ಕರಡು ರೂಪಿಸುವ ಕೆಲಸಕ್ಕೆ ಬೆಂಬಲ ನೀಡುತ್ತೇವೆ. ಆದರೆ, ಹಲವು ಬೇಡಿಕೆಗಳನ್ನು ಈಡೇರಿಸಲು ಸಂವಿಧಾನ ತಿದ್ದುಪಡಿಯ ಅವಶ್ಯಕತೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.