ADVERTISEMENT

‘ಸವಿತಾ ಸಮಾಜ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ’

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 19:30 IST
Last Updated 22 ಫೆಬ್ರುವರಿ 2018, 19:30 IST

ಬೆಂಗಳೂರು: ‘ಈ ಬಾರಿಯ ಬಜೆಟ್‌ನಲ್ಲಿ ಸವಿತಾ ಸಮಾಜಕ್ಕೆ ₹25 ಕೋಟಿ ಅನುದಾನ ಘೋಷಿಸಲಾಗಿದೆ. ಇದನ್ನು ಬಳಸಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜ ಒತ್ತಾಯಿಸಿದೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವಿತಾ ಸಮಾಜದ ಅಧ್ಯಕ್ಷ ಯು. ಕೃಷ್ಣಮೂರ್ತಿ, ‘ಸವಿತಾ ಸಮುದಾಯ ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ಕೋಟಿ ಲೆಕ್ಕದಲ್ಲಿ ಘೋಷಣೆಯಾಗುವ ಅನುದಾನ ಫಲಾನುಭವಿಗಳ ಕೈಸೇರುತ್ತಿಲ್ಲ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಮುಂದೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT