ADVERTISEMENT

5,623 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2018, 19:59 IST
Last Updated 4 ಮಾರ್ಚ್ 2018, 19:59 IST
ಉದ್ಯೋಗಾಕಾಂಕ್ಷಿಗಳೊಂದಿಗೆ ಮುರಳೀಧರ ಹಾಲಪ್ಪ ಹಾಗೂ ಎಸ್.ಟಿ.ಸೋಮಶೇಖರ್ ಚರ್ಚೆ ನಡೆಸಿದರು
ಉದ್ಯೋಗಾಕಾಂಕ್ಷಿಗಳೊಂದಿಗೆ ಮುರಳೀಧರ ಹಾಲಪ್ಪ ಹಾಗೂ ಎಸ್.ಟಿ.ಸೋಮಶೇಖರ್ ಚರ್ಚೆ ನಡೆಸಿದರು   

ಬೆಂಗಳೂರು: ಕರ್ನಾಟಕ ಕೌಶಲ ಅಭಿವೃದ್ಧಿ ಮತ್ತು ವೃತ್ತಿ ತರಬೇತಿ ನಿಗಮವು ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 5,623 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, ‘ರಾಜ್ಯ ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಣೆಗೆ ವಿದ್ಯಾವಂತ ಯುವಕರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುತ್ತಿದೆ. ವಿದ್ಯಾವಂತರು ಕೀಳರಿಮೆ ಬಿಟ್ಟು ದೊರೆತ ಉದ್ಯೋಗದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ, ‘ಯುವಜನತೆಗೆ ವಿದೇಶಗಳಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲು ವಿದೇಶಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮೈಸೂರಿನಲ್ಲಿ ವಿದೇಶಿ ಕೋಶಕ್ಕೆ ಶ್ರೀಘ್ರದಲ್ಲಿಯೇ ಚಾಲನೆ ನೀಡಲಾಗುವುದು’ ಎಂದರು.

ADVERTISEMENT

‘ರಾಜ್ಯದ 1.82 ಲಕ್ಷ ವಿದ್ಯಾವಂತ ನಿರುದ್ಯೋಗಿಗಳಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.