ADVERTISEMENT

61 ಎಪಿಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 19:45 IST
Last Updated 4 ಏಪ್ರಿಲ್ 2018, 19:45 IST

ಬೆಂಗಳೂರು: ಸಹಾಯಕ ಸರ್ಕಾರಿಪ್ರಾಸಿಕ್ಯೂಟರ್‌ಗಳ (ಎಪಿಪಿ) ನೇಮಕ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ಆರೋಪಿಗಳಾದ 61 ಎಪಿಪಿಗಳು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯದ ವಿವಿಧ ಕೋರ್ಟ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 61 ಎಪಿಪಿ ಹಾಗೂ ಎಜಿಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತಿರಸ್ಕರಿಸಿ ಆದೇಶಿಸಿದ್ದಾರೆ.

2012ರಲ್ಲಿ 197 ಜನ ಎಪಿಪಿಗಳ ಆಯ್ಕೆ ಪ್ರಕ್ರಿಯೆ ವೇಳೆಯ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ವಕೀಲ ಎಚ್‌.ಟಿ.ರವಿ ಲೋಕಾಯುಕ್ತ ಪೊಲೀಸರಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.