ಕೋವಿಡ್
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಇದೇ 29ರಂದು ಮರಣ ಹೊಂದಿದ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಪೀಡಿತರಾಗಿದ್ದರು ಎನ್ನುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ.
ಇದರಿಂದಾಗಿ ರಾಜ್ಯದಲ್ಲಿ ಈ ವರ್ಷ ವರದಿಯಾದ ಒಟ್ಟು ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕ್ಯಾನ್ಸರ್ ಪೀಡಿತರಾಗಿದ್ದ ಅವರು, ಕಿಮೊಥೆರಪಿ ಪಡೆಯುತ್ತಿದ್ದರು. ಇದೇ 21ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅಸ್ವಸ್ಥಗೊಂಡಿದ್ದ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲು ಗಂಟಲ ದ್ರವದ ಮಾದರಿ ಸಂಗ್ರಹಿಸಲಾಗಿತ್ತು. ಪರೀಕ್ಷೆ ವರದಿಯಲ್ಲಿ ಸೋಂಕಿತರಾಗಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 420 ದ್ರವ ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಶನಿವಾರ 58 ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಈ ವರ್ಷ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 425ಕ್ಕೆ ಏರಿಕೆಯಾಗಿದೆ.
ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಈ ಪ್ರಕರಣಗಳಲ್ಲಿ 225 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.