ADVERTISEMENT

ಏಳು ಬಾಲಕರಿಗೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 19:21 IST
Last Updated 6 ಡಿಸೆಂಬರ್ 2018, 19:21 IST

ಬೆಂಗಳೂರು: ಭಾಷೆ ಕಲಿಸುವ ನೆಪದಲ್ಲಿ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುನೀರ್ ಅಬ್ಬಾಸ್ (50) ವಿರುದ್ಧ ಇನ್ನೂ ಆರು ಬಾಲಕರ ಪೋಷಕರು ಬುಧವಾರ ಅಶೋಕನಗರ ಠಾಣೆಗೆ ದೂರು ಕೊಟ್ಟಿದ್ದಾರೆ.

‘ಅಬ್ಬಾಸ್ ನಮ್ಮ ಮಕ್ಕಳ ಮೇಲೂ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ’ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಿಚಾರಣೆಗಾಗಿ 10 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.ಗೌರಿಬಿದನೂರಿನ ಅಬ್ಬಾಸ್, ಮನೆಯಲ್ಲೇ ಮಕ್ಕಳಿಗೆ ಅರೇಬಿಕ್, ಕನ್ನಡ ಕಲಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT