ADVERTISEMENT

ವಿಧಾನಪರಿಷತ್ತಿಗೆ 7 ಅಭ್ಯರ್ಥಿಗಳ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಮೇ 2022, 21:28 IST
Last Updated 27 ಮೇ 2022, 21:28 IST
   

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಬೇಕಿದ್ದ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಶುಕ್ರವಾರ ಪ್ರಕಟಿಸಿದರು.

ಬಿಜೆಪಿಯ ಲಕ್ಷ್ಮಣ ಸವದಿ, ಕೇಶವಪ್ರಸಾದ್‌, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್‌, ಕಾಂಗ್ರೆಸ್‌ನ ಕೆ.ಅಬ್ದುಲ್ ಜಬ್ಬಾರ್, ಎಂ.ನಾಗರಾಜು ಯಾದವ್‌, ಜೆಡಿಎಸ್‌ನ ಟಿ.ಎ.ಶರವಣ ಅವರು ಆಯ್ಕೆಯಾದವರು. ಈ ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಬೇಕಿತ್ತು. ಫಲಿತಾಂಶ ಪ್ರಕಟಿಸಿದ ವಿಶಾಲಾಕ್ಷಿ ಅವರು, ಪ್ರಮಾಣಪತ್ರವನ್ನು ಅಭ್ಯರ್ಥಿಗಳಿಗೆ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT