ADVERTISEMENT

ವೇಶ್ಯಾವಾಟಿಕೆ; 7 ಮಹಿಳೆಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 19:21 IST
Last Updated 6 ನವೆಂಬರ್ 2020, 19:21 IST

ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಕಾಟನ್‌ಪೇಟೆಯ ಶಿವಾಸ್ ಸ್ಟೇ ಡಿಲಕ್ಸ್ ವಸತಿಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, 7 ಮಹಿಳೆಯರನ್ನು ರಕ್ಷಿಸಿದ್ದಾರೆ.

‘ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ದಾಳಿ ಮಾಡಿತ್ತು. ಮನೋಜ್‌ ಎಂಬಾತ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೆಲಸದ ಆಮಿಷವೊಡ್ಡಿ ಹೊರ ರಾಜ್ಯದಿಂದ ಯುವತಿಯರನ್ನು ಕರೆ ತರುತ್ತಿದ್ದ ಆರೋಪಿಗಳು, ಹಣದ ಆಸೆ ತೋರಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದರು. ವಾಟ್ಸ್‌ಆ್ಯಪ್ ಹಾಗೂ ಆ್ಯಪ್‌ಗಳ ಮೂಲಕ ಯುವತಿಯರ ಫೋಟೊಗಳನ್ನು ಗ್ರಾಹಕರಿಗೆ ಕಳುಹಿಸುತ್ತಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.