ADVERTISEMENT

8 ವಲಯಗಳಿಗೆ ನಾಲ್ಕು ವಿಶೇಷ ಆಯುಕ್ತರ ನೇಮಕಕ್ಕೆ ಸೂಚನೆ

ಬೆಂಗಳೂರು ಅಭಿವೃದ್ಧಿ: ಮುಖ್ಯಮಂತ್ರಿ ಇಂಗಿತ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 19:29 IST
Last Updated 6 ಸೆಪ್ಟೆಂಬರ್ 2019, 19:29 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಬೆಂಗಳೂರು ಮಹಾನಗರದ ವಿವಿಧ ಪ್ರದೇಶಗಳ ಅಭಿವೃದ್ಧಿ ಕುರಿತು ಚರ್ಚಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಂಟು ವಲಯಗಳಿಗೆ ನಾಲ್ಕು ವಿಶೇಷ ಆಯುಕ್ತರನ್ನು ಹೆಚ್ಚಿನ ಅಧಿಕಾರ ನೀಡಿ ನೇಮಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇಲ್ಲಿ ಶುಕ್ರವಾರ ಬೆಂಗಳೂರು ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು,ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸ್ಥಳೀಯ ಸಮಿತಿ ರಚಿಸಿ, ಮಾಸಿಕ ಸಭೆ ಮಾಡಬೇಕು ಎಂದರು.

ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆಯಾಗಿದ್ದು, ಕಸ ವಿಲೇವಾರಿಗೆ ಅಗತ್ಯವಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಬೇಕು.ಬೆಂಗಳೂರಿನ ರಸ್ತೆ, ಉದ್ಯಾನ
ಗಳನ್ನು ಸ್ವಚ್ಛವಾಗಿಡಲು 24 ಗಂಟೆಗಳ ಕಾಲ ಕೆಲಸ ಮಾಡಲು ಪೌರಕಾರ್ಮಿಕರನ್ನು ನೇಮಿಸುವ ಅಗತ್ಯವಿದೆ. ರಸ್ತೆಗಳಲ್ಲಿರುವ ಗುಂಡಿಗಳನ್ನು ಕೂಡಲೇ ಮುಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ,ಸಂಸದ ಪಿ. ಸಿ. ಮೋಹನ್‌, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್‌,ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.