ADVERTISEMENT

ಪರಿಹಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:11 IST
Last Updated 8 ಜುಲೈ 2022, 19:11 IST

ಬೆಂಗಳೂರು: ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ರಾಕೇಶ್‌ ಅವರ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ₹5 ಲಕ್ಷ ಪರಿಹಾರದ ಚೆಕ್‌ ವಿತರಿಸಲಾಯಿತು.

ಜೂನ್‌ 3ರಂದು ಸಂಜೆ ಮಳೆಯ ಸಂದರ್ಭದಲ್ಲಿ ರಾಕೇಶ್‌ (13) ಮರದ ಕೆಳಗೆ ನಿಂತಿದ್ದರು. ಆಗ ಅವರ ತಲೆಯ ಮೇಲೆ ಕೊಂಬೆ ಬಿದ್ದು, ಗಾಯಗೊಂಡಿದ್ದರು. ಜನಪ್ರಿಯ ನರ್ಸಿಂಗ್‌ ಹೋಂಗೆ ಸೇರಿಸಲಾಗಿತ್ತು. ಜೂನ್‌ 8 ರಂದು ಮೃತಪಟ್ಟಿದ್ದರು.

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ಭೇಟಿ ಮಾಡಿದ್ದ ಪೋಷಕರು, ಪರಿಹಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಅವರು ಕೂಡಲೇ ಪರಿಹಾರ ನೀಡಬೇಕೆಂದು ಸೂಚಿಸಿದ್ದರು. ಅದರಂತೆ, ಪೂರ್ವ ವಲಯದ ಆಯುಕ್ತ ಪಿ.ಎನ್‌. ರವೀಂದ್ರ ಅವರು ಪೋಷಕರಾದ ಸರವಣ ಮತ್ತು ಯಮುನಾ ಅವರಿಗೆ ಪರಿಹಾರದ ಚೆಕ್‌ ವಿತರಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.