ADVERTISEMENT

ಶೇ 80ರಷ್ಟು ಆರೋಪಿಗಳು ವ್ಯಸನಿಗಳು: ರವಿ.ಡಿ.ಚೆನ್ನಣ್ಣನವರ್‌

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 18:23 IST
Last Updated 6 ಅಕ್ಟೋಬರ್ 2019, 18:23 IST
ವಿ.ರಾಮಸ್ವಾಮಿ ಅವರು ಹಕ್ಕೊತ್ತಾಯ ಪತ್ರವನ್ನು ರವಿ ಚನ್ನಣ್ಣನವರ ಅವರಿಗೆ ನೀಡಿದರು. ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೋಹಿಣಿ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಆನಂದ ಸುವರ್ಣ, ವೈದ್ಯ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್‌ ಇದ್ದಾರೆ
ವಿ.ರಾಮಸ್ವಾಮಿ ಅವರು ಹಕ್ಕೊತ್ತಾಯ ಪತ್ರವನ್ನು ರವಿ ಚನ್ನಣ್ಣನವರ ಅವರಿಗೆ ನೀಡಿದರು. ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೋಹಿಣಿ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಆನಂದ ಸುವರ್ಣ, ವೈದ್ಯ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್‌ ಇದ್ದಾರೆ   

ನೆಲಮಂಗಲ: ‘ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗುವವರಲ್ಲಿ ಶೇ 80ರಷ್ಟು ಆರೋಪಿಗಳು ದುಶ್ಚಟ ಹೊಂದಿದವರಾಗಿರುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ. ಚನ್ನಣ್ಣನವರ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ನಿತ್ಯವೂ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ, ಶೇ 80ರಷ್ಟು ಆರೋಪಿಗಳು ವ್ಯಸನಿಗಳಾಗಿದ್ದಾರೆ. ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ರವಿ.ಡಿ.ಚೆನ್ನಣ್ಣನವರ ತಿಳಿಸಿದರು.

ADVERTISEMENT

ಜನಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿ.ರಾಮಸ್ವಾಮಿ ಅಂಗಡಿ, ‘ಹೋಟೆಲ್‌ಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸಬೇಕು. ಸಂಘಕ್ಕೆ ವಿಶೇಷ ಸೌಲಭ್ಯ ಮತ್ತು ಅನುದಾನ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

‘ಮದ್ಯವರ್ಜನ ಶಿಬಿರಗಳ ಮೂಲಕ 96 ಸಾವಿರಕ್ಕೂ ಹೆಚ್ಚು ಜನರನ್ನು ಮದ್ಯಪಾನ ಮುಕ್ತರನ್ನಾಗಿಸಿದ್ದೇವೆ. ಬೀದಿ ನಾಟಕ, ಕಿರುಚಿತ್ರ, ಇತರೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.