ADVERTISEMENT

‘ಚಿತ್ರಕಲೆ ಸಮಾಜವನ್ನು‌ ಪ್ರತಿನಿಧಿಸುವ ಮಾಧ್ಯಮ’

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 20:19 IST
Last Updated 5 ಜುಲೈ 2018, 20:19 IST
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹಿರಿಯ ಕಲಾವಿದ ಪ್ರೊ.ದೇವರಾಜ ದಕ್ಕೂಜಿ ಮತ್ತು ಪತ್ನಿ ಪ್ರತಿಭಾ ದಕ್ಕೂಜಿ ಅವರನ್ನು ಸನ್ಮಾನಿಸಿದರು.
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹಿರಿಯ ಕಲಾವಿದ ಪ್ರೊ.ದೇವರಾಜ ದಕ್ಕೂಜಿ ಮತ್ತು ಪತ್ನಿ ಪ್ರತಿಭಾ ದಕ್ಕೂಜಿ ಅವರನ್ನು ಸನ್ಮಾನಿಸಿದರು.   

ಬೆಂಗಳೂರು‌: ‘ಚಿತ್ರಗಳು ನಮ್ಮ ಸಂಸ್ಕೃತಿ, ಇತಿಹಾಸ, ನಾಗರಿಕತೆಯನ್ನು ಪ್ರತಿಬಿಂಬಿಸುತ್ತವೆ’ಎಂದು ಉಪಮುಖ್ಯ ಮಂತ್ರಿ ಜಿ.ಪರಮೇಶ್ವರ ಹೇಳಿದರು.

ಚಿತ್ರಕಲಾ ಪರಿಷತ್ತಿನ ಸಂಸ್ಥಾಪಕ ಕಾರ್ಯದರ್ಶಿ ಪ್ರೊ.ಎಂ.ಎಸ್.ನಂಜುಂಡರಾವ್ ಅವರ 86ನೇ ಹುಟ್ಟುಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರತಿ ವರ್ಷ ನಡೆಯುವ ಚಿತ್ರ ಸಂತೆಯು ಅಂತರರಾಷ್ಟ್ರೀಯ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗುವಂತೆ ಪ್ರಸಿದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮ ಜವಾಬ್ದಾರಿಯಾಗಲಿ’ ಎಂದರು.

ADVERTISEMENT

ಚಿತ್ರಕಲಾ ಮಹಾವಿದ್ಯಾಲಯದ ನೂತನ ಕ್ಯಾಂಪಸ್‌ಗೆಹಿಂದಿನ‌ ಸರ್ಕಾರ ₹20ಕೋಟಿ ಅನುದಾನ ನೀಡಿದೆ. ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಪ್ರೊ.ದೇವರಾಜ್ ದಕ್ಕೋಜಿ ಅವರಿಗೆ ಪ್ರೊ.ಎಂ.ಎಸ್.ನಂಜುಂಡರಾವ್ ಪ್ರಶಸ್ತಿಯನ್ನು ಪ್ರದಾನ‌ ಮಾಡಲಾಯಿತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.