ಮಾದಕ ವಸ್ತು
(ಐಸ್ಟೋಕ್ ಚಿತ್ರ)
ಬೆಂಗಳೂರು: ಮಾದಕ ವಸ್ತು ಕಳ್ಳ ಸಾಗಣಿಕೆಯಿಂದ ಅಕ್ರಮವಾಗಿ ಆರೋಪಿ ಗಳಿಸಿದ್ದ ₹8.71 ಲಕ್ಷ ನಗದು ಅನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ಸಿಸಿಬಿ ಪೊಲೀಸರು ಮುಟ್ಟಗೋಲು ಹಾಕಿಕೊಂಡಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಕೇರಳದ ಆರೋಪಿ ಹಾಗೂ ನಗರದ ಇಬ್ಬರು ಪೆಡ್ಲರ್‌ಗಳಿಂದ ₹71 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌ಗಳನ್ನು ವಶಪಡಿಸಿಕೊಂಡು, ಎನ್‌ಡಿಪಿಎಸ್ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.
ಈ ಪೈಕಿ ಜೈಲಿನಿಂದಲೇ ಆರೋಪಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿರುವುದು ಗೊತ್ತಾಯಿತು. ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪೆಡೆದುಕೊಂಡು ತನಿಖೆ ಕೈಗೊಳ್ಳಲಾಯಿತು. ಡ್ರಗ್ ಪೆಡ್ಲಿಂಗ್‌ನಿಂದ ಬರುತ್ತಿದ್ದ ಹಣವನ್ನು ಆರೋಪಿಯು ತನ್ನ ಬ್ಯಾಂಕ್ ಖಾತೆ ಮತ್ತು ತಮ್ಮ ಸಂಬಂಧಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡುತ್ತಿರುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಪೊಲೀಸರು ಆತನ ಖಾತೆಯಲ್ಲಿದ್ದ ₹3.90 ಲಕ್ಷ, ಸಂಬಂಧಿಕರ ಖಾತೆಗಳಲ್ಲಿದ್ದ ₹81 ಸಾವಿರ ಹಾಗೂ ₹ 4 ಲಕ್ಷ ಸೇರಿ ಒಟ್ಟು ₹8.71 ಲಕ್ಷ ಹಣವನ್ನು ಮುಟ್ಟುಗೋಲು ಹಾಕಿ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.