ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮ ಗಣಿಗಾರಿಕೆಯನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿರುವ ಕಾಂಗ್ರೆಸ್ ಈ ಸಂಬಂಧ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಪಾಲರಿಗೆ ಇದೇ 9ರಂದು ದೂರು ನೀಡಲಿದೆ.
ರಾಜ್ಯದ ಉಸ್ತುವಾರಿ ಹೊತ್ತಿರುವ ಮಧುಸೂದನ ಮಿಸ್ತ್ರಿ, ಸಂಜಯ್ ನಿರುಪಮ್, ಕೆಪಿಸಿಸಿ ಪದಾಧಿಕಾರಿ ಗಳು, ಪಕ್ಷದ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರು ಒಟ್ಟಾಗಿ ತೆರಳಿ ರಾಜ್ಯ ಪಾಲರಿಗೆ ದೂರು ನೀಡಲಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು, ಅಕ್ರಮಗಳು ಮತ್ತು ಹಗರಣಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಡುತ್ತಿಲ್ಲ.
ಹಾಗಾಗಿ ಅನ್ಯ ಮಾರ್ಗವಿಲ್ಲದೆ ರಾಜ್ಯಪಾಲರಿಗೆ ದೂರು ನೀಡುವ ನಿರ್ಧಾರಕ್ಕೆ ಬರಲಾಗಿದೆ ಎಂದರು. ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದಂತೆ ಸರ್ಕಾರದ ಕಡತಗಳು ಎಚ್.ಡಿ. ದೇವೇಗೌಡ ಅವರ ಮನೆಯಲ್ಲಿ ಇರುವುದು ನಿಜವೇ ಆದಲ್ಲಿ ಅದಕ್ಕೆ ಸರ್ಕಾರವೇ ಹೊಣೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.