ಬೆಂಗಳೂರು (ಪಿಟಿಐ): ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಬುಧವಾರ ಪ್ರತಿಭಟನೆ ಮಾಡಲು ಮುಂದಾದ ವಕೀಲರನ್ನು ತಡೆದ ಪೊಲೀಸರು 9 ಮಂದಿ ವಕೀಲರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.
ಮಾರ್ಚಿ 2 ರಂದು ನಡೆದ ಗಲಭೆ ಹಿನ್ನೆಲೆಯಲ್ಲಿ ಮಾರ್ಚಿ 18 ರವರೆಗೂ ನಿಷೇದಾಜ್ಞೆ ಹೇರಲಾಗಿತ್ತು.
ನಿಷೇಧಾಜ್ಷೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದ ವಕೀಲರನ್ನು ತಡೆದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 9 ಮಂದಿ ವಕೀಲರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಡಿಸಿಪಿ ರಮೇಶ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.