ಬೆಂಗಳೂರು: ಶಾಲೆಯಿಂದ ಮನೆಗೆ ಮರಳುತ್ತಿದ್ದ 9 ವರ್ಷದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಶನಿವಾರ ನಡೆದಿದೆ. ಬಾಲಕಿ ಶಾಲೆ ಮುಗಿಸಿಕೊಂಡು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೇಗೂರು ಮುಖ್ಯರಸ್ತೆಯಲ್ಲಿ ನಡೆದು ಬರುತ್ತಿದ್ದಾಗ ಅಪಹರಿಸಿ ಕೃತ್ಯ ಎಸಗಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಆರೋಪಿಗಾಗಿ ಶೋಧ ನಡೆಯುತ್ತಿ ದೆಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.