ADVERTISEMENT

ಬೆಂಗಳೂರು: 93 ವರ್ಷದ ವೃದ್ಧ ಗುಣಮುಖ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 20:06 IST
Last Updated 11 ಜುಲೈ 2020, 20:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 93 ವರ್ಷದ ವೃದ್ಧರೊಬ್ಬರು ಗುಣಮುಖರಾಗಿ ಮನೆಗೆ ತೆರಳಿ
ದ್ದಾರೆ. ಅವರಿಗೆ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಈ ಹಿಂದೆ ಬೆಂಗಳೂರಿನಲ್ಲಿ 99 ವರ್ಷದ ವೃದ್ಧೆ ಹಾಗೂಚಿತ್ರದುರ್ಗದ ಹಿರಿಯೂರಿನಲ್ಲಿ 96 ವರ್ಷದ ಅಜ್ಜಿ ಚೇತರಿಸಿಕೊಂಡು ಮನೆಗೆ ತೆರಳಿದ್ದರು.

ಜಯನಗರದ ನಿವಾಸಿಯಾದ 93 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕೋವಿಡ್ ಪೀಡಿತರಾಗಿ ಜೂ.21 ರಂದು ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಯಿತು. 19 ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದಾರೆ.

ADVERTISEMENT

‘ಸೋಂಕಿತ ವ್ಯಕ್ತಿ ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಹಾಗಾಗಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಅವರು ಜು.9ರಂದು ಮನೆಗೆ ತೆರಳಿದ್ದಾರೆ’ ಎಂದು ಆಸ್ಪತ್ರೆಯ ಐಸಿಯು ವಿಭಾಗದ ಮುಖ್ಯಸ್ಥ ಡಾ.ಉಲ್ಲಾಸ್ ಗೋಪಾಲಕೃಷ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.