ADVERTISEMENT

ಕೆರೆ ತುಂಬಿಸಲು ₹ 93.50 ಕೋಟಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 3:37 IST
Last Updated 7 ಜನವರಿ 2022, 3:37 IST

ಬೆಂಗಳೂರು: ಕೆ.ಆರ್‌.ಪುರ ಪ್ರದೇಶದಲ್ಲಿ ಲಭ್ಯವಾಗುವ ತ್ಯಾಜ್ಯ ನೀರನ್ನು ಬಳಸಿಕೊಂಡು ಕೆ.ಆರ್‌.ಪುರ ತಾಲ್ಲೂಕಿನ 22 ಕೆರೆಗಳು ಮತ್ತು ಹೊಸಕೋಟೆ ತಾಲ್ಲೂಕಿನ ದೊಡ್ಡ ಕೆರೆಯನ್ನು ಭರ್ತಿ ಮಾಡುವ ₹ 93.50 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

‘ಸಣ್ಣ ನೀರಾವರಿ ಇಲಾಖೆ ಮೂಲಕ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ. ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಲು ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕೆ.ಆರ್‌.ಪುರದಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಏತ ನೀರಾವರಿ ಯೋಜನೆ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು’ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT