
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಕಾಂಗ್ರೆಸ್ ಸರ್ಕಾರದಲ್ಲಿ ದಲಿತರನ್ನೇ ಗುರಿ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಇಂತಹ ಷಡ್ಯಂತ್ರಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಮಾಜಿ ಸಂಸದ ಎಲ್.ಹನುಮಂತಯ್ಯ ಎಚ್ಚರಿಕೆ ನೀಡಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಿರೋಧ ಪಕ್ಷದ ನಾಯಕರು, ದಲಿತ ನಾಯಕರ ವಿರುದ್ದ ದಲಿತರನ್ನೇ ಎತ್ತಿ ಕಟ್ಟುವುದು ನಡೆಯುತ್ತಿದೆ ಮತ್ತು ದಲಿತ ನಾಯಕರನ್ನು ಗುರಿಯಾಗಿಸಿಕೊಂಡು ಅವರನ್ನು ಅಧಿಕಾರದಿಂದ ಇಳಿಸುವ ಸಂಚು ನಡೆಯುತ್ತಿದೆ’ ಎಂದರು.
ಮಾಜಿ ಸಚಿವ ಎಂ. ಶಿವಣ್ಣ, ಮಾಜಿ ಶಾಸಕ ಜಿ.ಎಸ್. ನಂಜುಂಡಸ್ವಾಮಿ, ಕಾಂಗ್ರೆಸ್ ಮುಖಂಡ ಗೌತಮ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.