ADVERTISEMENT

ವಾಯುವಿಹಾರಕ್ಕೆ ಸಾಕು ನಾಯಿ ಕರೆದೊಯ್ಯುವ ವೇಳೆ ಗಲಾಟೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 19:31 IST
Last Updated 2 ಜುಲೈ 2025, 19:31 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬನಶಂಕರಿಯ ಕದಿರೇನಹಳ್ಳಿಯಲ್ಲಿ ವಾಯು ವಿಹಾರಕ್ಕೆ ನಾಯಿಯನ್ನು ಕರೆದೊಯ್ಯುವ ವೇಳೆ ಎರಡು ಕುಟುಂಬಗಳ ಮಧ್ಯೆ ಬುಧವಾರ ಬೆಳಿಗ್ಗೆ ಗಲಾಟೆ ನಡೆದಿದೆ. 

ನಾಯಿ ಗಲೀಜು ಮಾಡಿದೆ ಎಂದು ಹೇಳಿದ್ದಕ್ಕೆ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ಆಗಿದೆ. ಎರಡು ಕುಟುಂಬಗಳು ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ADVERTISEMENT

‘ಯುವತಿ ಇಂದುಮತಿ ಅವರು ತಮ್ಮ ಮನೆಯ ಸಾಕು ನಾಯಿಯನ್ನು ವಾಯುವಿಹಾರಕ್ಕೆ ಕರೆದೊಯ್ಯುತ್ತಿದ್ದರು. ಆ ವೇಳೆ ವ್ಯಕ್ತಿಯೊಬ್ಬ, ‘ಯಾಕೆ ನಿಮ್ಮ ನಾಯಿಯನ್ನು ಮನೆಯ ಎದುರು ಕರೆತಂದು ಗಲೀಜು ಮಾಡಿಸುತ್ತೀಯಾ’ ಎಂದು ಪ್ರಶ್ನಿಸಿದ್ದರು. ಆಗ ನಡೆದ ಗಲಾಟೆಯು ವಿಕೋಪಕ್ಕೆ ಹೋಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಹಿಳೆಯರು ಪರಸ್ಪರ ತಲೆಕೂದಲು ಹಿಡಿದುಕೊಂಡು ಜಗಳ ಮಾಡಿಕೊಂಡಿದ್ದಾರೆ. ಚಪ್ಪಲಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಜಗಳ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಗೆ ದೂರು, ಪ್ರತಿದೂರು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.