ಬೆಂಗಳೂರು: ಹಣದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಜಿಕೆಡಬ್ಲ್ಯು ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಕಾರ್ತಿಕ್ (42) ಎಂದು ಗುರತಿಸಲಾಗಿದೆ. ಇವರನ್ನು ಮೋಹನ್ (24) ಎಂಬ ಯುವಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
‘ಆರೋಪಿ ಮೋಹನ್, ದೊಡ್ಡ ಕಲ್ಲಿನಿಂದಕಾರ್ತಿಕ್ ಅವರ ತಲೆಗೆ ಹೊಡೆದಿರುವ ಪರಿಣಾಮ ಮೃತಪಟ್ಟಿದ್ದಾರೆ. ಬಳಿಕ ಮೋಹನ್ ತಲೆಮರೆಸಿಕೊಂಡಿದ್ದಾನೆ. ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿರಬಹುದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.