ADVERTISEMENT

ಬೆಂಗಳೂರು | ಮಹಿಳೆ ಎಳೆದೊಯ್ಯಲು ಯತ್ನ: ವ್ಯಕ್ತಿ ಬೆತ್ತಲೆಗೊಳಿಸಿ ಥಳಿಸಿದ ಯುವಕರು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2024, 16:30 IST
Last Updated 8 ಸೆಪ್ಟೆಂಬರ್ 2024, 16:30 IST
   

ಬೆಂಗಳೂರು: ಅಂಗಡಿಗೆ ಹಾಲು ತರಲು ಬಂದಿದ್ದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ, ಥಳಿಸಿರುವ ಘಟನೆ ನಗರದ ಹೊರ ವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ಕಾಲೊನಿ ಬಳಿ ಶನಿವಾರ ನಡೆದಿದೆ.

ಕಲ್ಕೆರೆ ಹೋಟೆಲ್‌ನಲ್ಲಿ ಬಾಣಸಿಗರಾಗಿರುವ ಧಾರವಾಡದ ರವಿಕುಮಾರ್ ಎಂಬುವರು ಮದ್ಯದ ಅಮಲಿನಲ್ಲಿ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾರೆ. ಭಯಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡ ವೇಳೆ ಗ್ರಾಮದ ಯುವಕರು ನೆರವಿಗೆ ಧಾವಿಸಿದ್ದಾರೆ. ರವಿಕುಮಾರ್ ಅವರನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.  

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ, ರವಿಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಗೊಟ್ಟಿಗೆರೆಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.