ಬೆಂಗಳೂರು: ಶಿವಾಜಿನಗರದ ರಸೆಲ್ ಮಾರುಕಟ್ಟೆಗೆ ಹೊಸ ರೂಪ ನೀಡಲು ಪುನರ್ ಅಭಿವೃದ್ಧಿಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಅಂತಿಮ ಅಂತದಲ್ಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಮತ್ತು ನಾಗರಿಕ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ರಸೆಲ್ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡಿ, ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಲು ಸೂಚಿಸಿದರು.
‘ಪಾರ್ಕಿಂಗ್ ವ್ಯವಸ್ಥೆ, ಒಳಚರಂಡಿ, ನೀರು, ವಿದ್ಯುತ್, ಅಗ್ನಿ ಸುರಕ್ಷತೆ, ಶೌಚಾಲಯ ಸೌಲಭ್ಯಗಳು, ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆಯ ಜೊತೆಗೆ ಸೌರಶಕ್ತಿ, ಮಳೆನೀರು ಸಂಗ್ರಹಕ್ಕೆ ಅನುಗುಣವಾಗಿ ವಿನ್ಯಾಸ ಮಾಡಲಾಗುತ್ತದೆ’ ಎಂದರು.
ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ‘ರಸೆಲ್ ಮಾರುಕಟ್ಟೆಯು ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಿರ್ಮಾಣ ಮಾಡಬೇಕು. ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಾಗಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.