ಬೆಂಗಳೂರು: ಮಹದೇವಪುರ ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿ ಮುಖ್ಯರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಪಾರ್ಟಿ ನಡೆಸುತ್ತಿದ್ದ ವೇಳೆ ಬುಧವಾರ ರಾತ್ರಿ 7.30ರ ವೇಳೆಗೆ ಯುವಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪ್ರಕಾಶ್ (19) ಮೃತಪಟ್ಟವರು.
ಮೂಲತಃ ರಾಯಚೂರಿನ ನಿವಾಸಿ ಪ್ರಕಾಶ್ ಅವರು ಸ್ವಿಗ್ಗಿ ಡೆಲಿವರಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
‘ಇವರ ತಂದೆ ಲಕ್ಷ್ಮಪ್ಪ ಅವರು ಚಾಲಕರಾಗಿದ್ದು, ತಾಯಿ ಮನೆಕೆಲಸ ಮಾಡುತ್ತಾರೆ. ಸ್ನೇಹಿತರ ಜೊತೆಗೂಡಿ ಪಾರ್ಟಿ ಮಾಡುವಾಗ ಮದ್ಯದ ನಶೆಯಲ್ಲಿ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ನೇಹಿತರು, ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಮೃತನ ತಂದೆ ನೀಡಿೆದ ದೂರು ಆಧರಿಸಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.