ಬೆಂಗಳೂರು: ಪಶ್ಚಿಮ ವಿಭಾಗದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವ್ಹೀಲಿ ನಡೆಸುತ್ತಿದ್ದ ಯುವಕ ಪಿ. ಅಕ್ಷಯ್ ಎಂಬಾತನನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಯುವಕ ಅಪಾಯಕಾರಿಯಾಗಿ ವ್ಹೀಲಿ ನಡೆಸುತ್ತಿರುವುದು ಕಂಡುಬಂದಿತ್ತು. ಆಗ ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.
‘ಬಾಪೂಜಿ ನಗರದ ನಿವಾಸಿ ಅಕ್ಷಯ್, ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಬಂದು ವ್ಹೀಲಿ ನಡೆಸುತ್ತಿದ್ದ’ ಎಂದು ಸಂಚಾರ ಪೊಲೀಸರು ಹೇಳಿದರು.
ಬಿಎನ್‌ಎಸ್ ಕಾಯ್ದೆ ಸೆಕ್ಷನ್ 129, 189 ಹಾಗೂ ಮೋಟಾರು ವಾಹನಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.
ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಾಗಡಿ ಮುಖ್ಯರಸ್ತೆಯಲ್ಲಿ ಯುವಕರು ಬೈಕ್‌ನಲ್ಲಿ ವ್ಹೀಲಿ ನಡೆಸುತ್ತಿರುವ ಕುರಿತು ದೂರುಗಳು ಬಂದಿವೆ. ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಅನಿತಾ ಹದ್ದಣ್‌ನವರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.