ADVERTISEMENT

ಸಾಮಾಜಿಕ ವ್ಯವಸ್ಥೆಗೆ ಧಕ್ಕೆ ತರುವ ಯತ್ನ: ಆಕಾರ್‌ ಪಟೇಲ್‌

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 20:54 IST
Last Updated 18 ಡಿಸೆಂಬರ್ 2021, 20:54 IST
ಆಕಾರ ಪಟೇಲ್‌
ಆಕಾರ ಪಟೇಲ್‌   

ಬೆಂಗಳೂರು: ‘ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡಿರುವ ನೀತಿ ಮತ್ತು ಧೋರಣೆಗಳಿಂದ ದೇಶದ ಸಾಮಾಜಿಕ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಅಂಕಣಕಾರ ಆಕಾರ್‌ ಪಟೇಲ್‌ ಕಳವಳ ವ್ಯಕ್ತಪಡಿಸಿದರು.

ದೇಶದಲ್ಲಿನ ಪ್ರಸ್ತುತ ವಿದ್ಯಮಾನಗಳ ಕುರಿತು ವಿಶ್ಲೇಷಿಸಿದ ಅವರು, ‘ಆಹಾರ ಸೇವಿಸಲು ಮತ್ತು ಪ್ರಾರ್ಥನೆ ಮಾಡಲು ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ನಾಗರಿಕರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಇದಾಗಿದೆ’ ಎಂದರು.

‘ಸರ್ಕಾರವೇ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಹೀಗಾಗಿಯೇ, ಗುಂಪು ಹತ್ಯೆಗಳು ನಡೆಯುತ್ತಿವೆ. 2015ರ ನಂತರ ಶೇಕಡ 90ರಷ್ಟು ಗುಂಪು ಹಲ್ಲೆಗಳು ಅಲ್ಪಸಂಖ್ಯಾತರ ಮೇಲೆ ನಡೆದಿವೆ. ಅಲ್ಪಸಂಖ್ಯಾತರ ವಿರುದ್ಧ ನಡೆದಿರುವ ದೌರ್ಜನ್ಯಗಳ ಕುರಿತು ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಮಾನವ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ’ ಎಂದು ಹೇಳಿದರು.

ADVERTISEMENT

‘ಈಗಾಗಲೇ ಬಿಜೆಪಿ ಆಡಳಿತ ಇರುವ ಐದು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲಾಗಿದೆ. ಕರ್ನಾಟಕದಲ್ಲೂ ಜಾರಿಯಾಗುವ ಸಾಧ್ಯತೆ ಇದೆ’ ಎಂದರು.

’ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆರ್ಥಿಕತೆ ಮೇಲೆ ಅಪಾರ ಪರಿಣಾಮ ಬೀರಿದೆ. ಆರ್ಥಿಕತೆ ಚೇತರಿಸಿಕೊಳ್ಳುವ ನೀತಿಗಳನ್ನು ಸರ್ಕಾರ ರೂಪಿಸಿಲ್ಲ. ಮೇಕ್‌ ಇನ್‌ ಇಂಡಿಯಾ ನೀತಿ ಜಾರಿಯಾದ ಬಳಿಕ ತಯಾರಿಕಾ ವಲಯದಲ್ಲಿ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ಕುಸಿದಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.