
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವ ಆಕಾಂಕ್ಷಿಗಳಿಂದ ಆಮ್ ಆದ್ಮಿ ಪಕ್ಷ (ಎಎಪಿ) ಅರ್ಜಿಗಳನ್ನು ಆಹ್ವಾನಿಸಿದೆ.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ, ‘ಐದು ನಗರ ಪಾಲಿಕೆಗಳ ಚುನಾವಣೆಯಲ್ಲಿ ಎಎಪಿಯಿಂದ ಸ್ಪರ್ಧಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಎಲ್ಲರೂ ಒಂದಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸುಂದರ ಬೆಂಗಳೂರನ್ನು ಕಟ್ಟೋಣ’ ಎಂದರು.
‘ಕಳೆದ ಐದು ವರ್ಷಗಳಿಂದ ಬೆಂಗಳೂರಿನಲ್ಲಿ ಚುನಾವಣೆಗಳನ್ನು ನಡೆಸದೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ಇತಿಶ್ರೀ ಹಾಡುವ ಸಮಯ ಬಂದಿದೆ. ನಗರ ಪಾಲಿಕೆ ಚುನಾವಣೆಗೆ ಎಎಪಿ ಸ್ಪರ್ಧಿಸಿ, ಜಯಗಳಿಸುವ ಮೂಲಕ ಆಡಳಿತ ನಡೆಸಲು ಸಜ್ಜಾಗಿದೆ’ ಎಂದು ಹೇಳಿದರು..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.