ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಕಾರ್ಯಕಾರಿಣಿಯನ್ನು ಜೂನ್ 8ರಂದು ಆಯೋಜಿಸಲಾಗಿದೆ. ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಭಾಗವಹಿಸಲಿದ್ದಾರೆ ಎಂದು ಎಎಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ.
ನಗರದ ಯುವಿಸಿಇ ಅಲುಮ್ನಿ ಅಸೋಸಿಯೇಷನ್‌ನಲ್ಲಿ ಬೆಳಿಗ್ಗೆ 9ರಿಂದ ಕಾರ್ಯಕಾರಿಣಿ ನಡೆಯಲಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು. ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ರಾಜ್ಯ ಅಧ್ಯಕ್ಷರು, ಜಿಲ್ಲಾ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.