ಬೆಂಗಳೂರಿನಲ್ಲಿ ಮತ್ತೆ ಟ್ರಾಫಿಕ್ ಸಮಸ್ಯೆ ಸದ್ದು ಮಾಡುತ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ದಟ್ಟಣೆ ಸಮಸ್ಯೆ ತೀವ್ರವಾಗಿದೆ. ನಗರದಲ್ಲಿ ನಿರ್ಬಂಧಿತ ಸ್ಥಳಗಳಲ್ಲಿಯೇ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ದಟ್ಟಣೆಯ ಸಮಸ್ಯೆ ತೀವ್ರವಾಗಿದೆ. ಶೀಘ್ರದಲ್ಲೇ ನಗರದಲ್ಲಿ ಟೋಯಿಂಗ್ ಜಾರಿ ಮಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಸವಾರರು ಹಾಗೂ ಚಾಲಕರಿಗೆ ಟೋಯಿಂಗ್ ಬಿಸಿ ತಟ್ಟುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.