ಬಂಧನ ( ಸಾಂಕೇತಿಕ ಚಿತ್ರ)
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಮಂಜೂರು ಮಾಡುವ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಆರತಿ ಅವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಆರತಿ ಪ್ರಕರಣವೊಂದರ ಆರೋಪಿಗೆ ಜಾಮೀನು ಕೊಡಿಸುವುದಾಗಿ ನ್ಯಾಯಮೂರ್ತಿಯೊಬ್ಬರ ಹೆಸರು ದುರ್ಬಳಕೆ ಮಾಡಿಕೊಂಡು ಆರೋಪಿಯ ತಾಯಿಯಿಂದ ಹಣ ಪಡೆದಿದ್ದರು ಎಂಬ ಆರೋಪ ಇತ್ತು. ಸದ್ಯ ಆಕೆಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಕರಣ ಸಂಬಂಧ ಹೈಕೋರ್ಟ್‌ನ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ಅವರು ನೀಡಿದ ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 318 (4) (ವಂಚನೆ) ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.