ADVERTISEMENT

ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪ:ವಿಚಾರಣೆಗೆ 15 ದಿನಗಳ ಕಾಲಾವಕಾಶ ಕೋರಿದ ಜೋಶಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 16:20 IST
Last Updated 21 ಸೆಪ್ಟೆಂಬರ್ 2025, 16:20 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಹಕಾರ ಇಲಾಖೆ ನೀಡಿದ ನೋಟಿಸ್‌ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ 15 ದಿನಗಳ ಕಾಲಾವಕಾಶ ಕೇಳಿದ್ದಾರೆ. 

ಈ ಸಂಬಂಧ ಅವರು ಸಹಕಾರ ಇಲಾಖೆ ಕಾರ್ಯದರ್ಶಿ ಸಂಜಯ ಶೆಟ್ಟಣ್ಣನವರ್ ಅವರಿಗೆ ಪತ್ರ ಬರೆದಿದ್ದಾರೆ. ‘ಸಹೋದರಿ ಪತಿ ಲಿಂಗರಾಜ ಕುರ್ತಕೋಟಿ ಅವರು ಮೃತಪಟ್ಟ ಕಾರಣ, ಲಿಖಿತ ಹೇಳಿಕೆ ನೀಡಲು ಹಾಗೂ ವಿಚಾರಣೆಗೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ. 

‘ಮೇಲ್ನೋಟಕ್ಕೆ ಆರೋಪಗಳು ಸಾಬೀತಾಗಿರುವುದರಿಂದ ಏಕೆ ಆಡಳಿತಾಧಿಕಾರಿ ನೇಮಿಸಬಾರದು’ ಎಂದು ನೋಟಿಸ್‌ನಲ್ಲಿ ಪ್ರಶ್ನಿಸಿದ್ದ ಸಹಕಾರ ಇಲಾಖೆ ಕಾರ್ಯದರ್ಶಿ, ಇದೇ 22ರಂದು ಬೆಳಿಗ್ಗೆ 11.30ರೊಳಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಒಂದು ವೇಳೆ ಹೇಳಿಕೆ ಸಲ್ಲಿಸಲು ತಪ್ಪಿದಲ್ಲಿ ನಿಯಮಾನುಸಾರ ಮುಂದಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.