ADVERTISEMENT

ಅಜೀಂ ಪ್ರೇಮ್‌ ಜೀ ವಿ.ವಿ ಆವರಣಕ್ಕೆ ನುಗ್ಗಲು ABVP ಯತ್ನ: ಪ್ರತಿಭಟನಕಾರರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 15:03 IST
Last Updated 24 ಫೆಬ್ರುವರಿ 2026, 15:03 IST
<div class="paragraphs"><p>ಪ್ರತಿಭಟನಕಾರರು</p></div>

ಪ್ರತಿಭಟನಕಾರರು

   

ಬೆಂಗಳೂರು: ದೇಶವಿರೋಧಿ ಚಿಂತನೆಯ ಕಾರ್ಯಕ್ರಮಗಳಿಗೆ ಆನೇಕಲ್ ತಾಲ್ಲೂಕಿನ ಸರ್ಜಾ‍ಪುರದಲ್ಲಿ ಇರುವ ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯವು ವೇದಿಕೆ ಕಲ್ಪಿಸುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರು, ಮಂಗಳವಾರ ಸಂಜೆ ವಿ,ವಿಗೆ ನುಗ್ಗಲು ಯತ್ನಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು.

ಅಖಿಲ ಭಾರತೀಯ ವಿದ್ಯಾರ್ಥಿ ಸಂಘವು (ಎಐಎಸ್‌ಎ) ದೇಶವಿರೋಧಿ ಚಿಂತನೆಯ ಕಾರ್ಯಕ್ರಮ ನಡೆಸುತ್ತಿದೆ. ಆ ಕಾರ್ಯಕ್ರಮಗಳಿಗೆ ಅಜೀಂ ಪ್ರೇಮ್‌ ಜೀ ವಿ.ವಿ ವೇದಿಕೆ ಕಲ್ಪಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ADVERTISEMENT

ಎಬಿವಿಪಿಯ ಬಾವುಟ ಹಿಡಿದು ಪ್ರತಿಭಟನಕಾರರು ಬಂದಿದ್ದರು. ಬಳಿಕ ವಿ.ವಿಯ ಗೇಟ್‌ ಒದ್ದು ಒಳಕ್ಕೆ ನುಗ್ಗಿ ಆಕ್ರೋಶ ಹೊರಹಾಕಿದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.

ಬಳಿಕ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.