ADVERTISEMENT

ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 12:20 IST
Last Updated 11 ಡಿಸೆಂಬರ್ 2020, 12:20 IST
ಎಸಿಬಿಯು ವಶಕ್ಕೆ ಪಡೆದ ನಗದು ಹಣ
ಎಸಿಬಿಯು ವಶಕ್ಕೆ ಪಡೆದ ನಗದು ಹಣ   

ಬೆಂಗಳೂರು: ಭ್ರಷ್ಟಾಚಾರ ಆರೋಪದ‌ ಮೇಲೆ‌ ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.

ಕಚೇರಿಯಲ್ಲಿ ಬೃಹತ್ ಪ್ರಮಾಣದ ಲಂಚದ ವಹಿವಾಟು ನಡೆಯುತ್ತಿರುವ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೃಹತ್ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ. ಕಚೇರಿಯೊಳಗಿದ್ದ ಖಾಸಗಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಎಸಿಬಿ ಬೆಂಗಳೂರು ನಗರ ಘಟಕದ ಎಸ್ ಪಿ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ‌. ಶೋಧ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.