ADVERTISEMENT

ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟ ಆರೋಪ‍: ಎಸಿಬಿಯಿಂದ ದಾಖಲೆ ವಶ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 19:45 IST
Last Updated 22 ಡಿಸೆಂಬರ್ 2021, 19:45 IST

ಬೆಂಗಳೂರು: ಗೋಮಾಳವನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಡಲಾಗಿದೆ ಎಂಬ ದೂರು ಆಧರಿಸಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ನಗರದ ಹೊರ ವಲಯದ ಎರಡು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದರು.

‘ಸಮೇತನಹಳ್ಳಿ ಮತ್ತು ದೊಡ್ಡಗಟ್ಟಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೋಮಾಳ ಜಾಗವನ್ನು ಎರಡು ವರ್ಷಗಳಿಂದ ಅಕ್ರಮವಾಗಿ ಅನ್ಯರಿಗೆ ಖಾತೆ ಮಾಡಿಕೊಡಲಾಗಿದೆ ಎಂಬ ದೂರು ಬಂದಿತ್ತು. ಅದನ್ನು ಆಧರಿಸಿ ದಾಖಲೆ ವಶಕ್ಕೆ ಪಡೆಯಲಾಗಿದೆ. ತನಿಖೆ ಇನ್ನಷ್ಟೇ ನಡೆಯಬೇಕಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT